ರಾಜ್ಯದ 3.65 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದ 3,65,614 ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಸಾಕಷ್ಟು ಜನ ಅನರ್ಹರು ಬಿ ಪಿಎಲ್ ಕಾರ್ಡ್ ಹೊಂದಿದ್ದು, ಅವುಗಳನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.






