ಕನಕದಾಸ ಶಾಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಕ್ರಮ

ಜನರ ಧ್ವನಿ ನ್ಯೂಸ್

ಮಾದಕ ವಸ್ತುಗಳ ವಿರುದ್ಧ ಜಾಗೃತಿ: ಮುದ್ದೇಬಿಹಾಳ ದಲ್ಲಿ ವಿಶೇಷ ಕಾರ್ಯಕ್ರಮ
ಮುದ್ದೇಬಿಹಾಳ, ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸ್, ಮುದ್ದೇಬಿಹಾಳ ಪೊಲೀಸ್ ಠಾಣೆ ಹಾಗೂ ಸಂತ ಕನಕದಾಸ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತುಗಳ ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ಸೇವನೆಯ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆರ್. ಎಸ್. ಬಂಗಿ ಮಾತನಾಡಿ, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳುಮಾಡುವ ಮಾರಕ ಚಟುವಟಿಕೆಯಾಗಿದೆ ಎಂದು ತಿಳಿಸಿದರು. ಮದ್ಯ, ತಂಬಾಕು, ಗಾಂಜಾ, ಹೆರಾಯಿನ್ ಹಾಗೂ ಕೊಕೇನ್‌ನಂತಹ ಅಮಲು ಪದಾರ್ಥಗಳ ಸೇವನೆ ಆರಂಭದಲ್ಲಿ ಕುತೂಹಲ, ಸ್ನೇಹಿತರ ಒತ್ತಡ ಅಥವಾ ಮಾನಸಿಕ ಒತ್ತಡದಿಂದ ಆರಂಭವಾದರೂ, ನಂತರ ವ್ಯಕ್ತಿಯನ್ನು ಸಂಪೂರ್ಣವಾಗಿ ವ್ಯಸನಕ್ಕೆ ದಾಸನನ್ನಾಗಿ ಮಾಡುತ್ತದೆ ಎಂದು ಹೇಳಿದರು.
ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನ ಕಾರ್ಯಕ್ಷಮತೆ ಕುಂಠಿತಗೊಳ್ಳುವುದಲ್ಲದೆ, ಲಿವರ್ ಸಮಸ್ಯೆ, ಕ್ಯಾನ್ಸರ್, ಕ್ಷಯರೋಗ ಹಾಗೂ ನೆನಪಿನ ಶಕ್ತಿ ಕುಂಠಿತಗೊಳ್ಳುವಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ಅವರು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಕಾರ್ಯದರ್ಶಿ ಬಿ. ಎಸ್. ಮೇಟಿ ಮಾತನಾಡಿ, ಅಮಲಿನ ವ್ಯಸನಕ್ಕೆ ಒಳಗಾದ ಯುವಕರು ಕಳ್ಳತನ, ಅಪರಾಧ ಕೃತ್ಯಗಳು ಹಾಗೂ ಸಮಾಜಘಾತುಕ ಚಟುವಟಿಕೆಗಳತ್ತ ಆಕರ್ಷಿತರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ. ಎಸ್. ಪಣೇದಕಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಂ. ಎನ್. ಯರಝರಿ, ಪೊಲೀಸ್ ಇಲಾಖೆಯ ಸಂಗಯ್ಯ ಹಿರೇಮಠ, ಯಮನಪ್ಪ ಬಜಂತ್ರಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕುಮಾರಿ ಪ್ರಿಯಾ ಬಡಿಗೇರ ಪ್ರಾರ್ಥನೆ ನೆರವೇರಿಸಿದರು. ಎಂ. ಎನ್. ಯರಝರಿ ಸ್ವಾಗತಿಸಿದರು. ಗೋಪಾಲ ಹೂಗಾರ ಕಾರ್ಯಕ್ರಮವನ್ನು ನಿರೂಪಿಸಿದರು. ಸಿ ಪಿ ಐ ಸಾಹೇಬರು ಸ್ವಾಗತವನ್ನು ಕೋರಿದರು ಕೊನೆಯಲ್ಲಿ ಎಲ್ಲರೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಕೈಗೊಂಡರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಶಿಕ್ಷಕಿಯರು ಶಾಲೆಯ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರುಉಪಸ್ಥಿತರಿದ್ದರು ಉಪಸ್ಥಿತರಿದ್ದರು.

विज्ञापन बॉक्स (विज्ञापन देने के लिए संपर्क करें)

ಇದನ್ನೂ ಓದಿ ----

ತಪ್ಪದೇ ಮತ ಚಲಾಯಿಸಿ

क्या आपको लगता है कि बॉलीवुड ड्रग्स केस में और भी कई बड़े सितारों के नाम सामने आएंगे?

View Results

Loading ... Loading ...

आज का राशिफल देखें