ಬಸ್ ನಿಲ್ದಾಣದ ಅಭಿವೃದ್ಧಿಗಾಗಿ ಸರ್ಕಾರದಿಂದ ಹಣ ಬಿಡುಗಡೆ: ಶಾಸಕ ಸಿ ಎಸ್ ನಾಡಗೌಡ

ಮುದ್ದೇಬಿಹಾಳಬಸ್ ನಿಲ್ದಾಣದ ಆವರಣವನ್ನುಕಾಂಕ್ರೀಟ್ ಆಫ್ ಮಾಡುವ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಸುಮಾರು 4ಕೋಟಿ 90 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಸಾಬೂನುಹಾಗೂ ಮಾರ್ಜಕ ನಿಗಮದ ನಿ. ಅಧ್ಯಕ್ಷರೂ ಆಗಿರುವ ಶಾಸಕ ಸಿ.ಎಸ್‌.ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನುಆಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಸ್ನಿಲ್ದಾಣವು ಸಾವಿರಾರು ಪ್ರಯಾಣಿಕರ ನಿತ್ಯ ಸಂಚಾರದ ಪ್ರಮುಖ ಕೇಂದ್ರವಾಗಿದ್ದು, ಮಳೆಗಾಲ ಹಾಗೂ ಬೇಸಿಗೆಯಲ್ಲಿ ಸಾರ್ವಜನಿಕರು ಎದುರಿಸುವ ತೊಂದರೆಗಳನ್ನು ಮನಗಂಡು ಕಾಂಕ್ರೀಟ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.ಇದೇ ವೇಳೆ ಹಡಲಗೇರಿ ರಸ್ತೆಯಲ್ಲಿ ಡಿಪೊ ನಿರ್ಮಾಣಕ್ಕಾಗಿ ಸುಮಾರು3 ಎಕರೆ ಸ್ಥಳವನ್ನು ಪರಿಶೀಲಿಸಲಾಗಿದ್ದು, ಈ ಕುರಿತು ಇನ್ನೂ ಅಂತಿಮ ಹಂತದ ನಿರ್ಧಾರ ಕೈಗೊಳ್ಳಬೇಕಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಡಿಪೊ ಮ್ಯಾನೇಜರ್ ಅಶೋಕಕುಮಾರ ಬೋವಿ,ಗೋಪಾಲ ಮಡಿವಾಳರ, ಜೆ.ಡಿ. ಮುಲ್ಲಾ ಸೇರಿದಂತೆ ಸಾರಿಗೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

विज्ञापन बॉक्स (विज्ञापन देने के लिए संपर्क करें)

ಇದನ್ನೂ ಓದಿ ----

ತಪ್ಪದೇ ಮತ ಚಲಾಯಿಸಿ

क्या आपको लगता है कि बॉलीवुड ड्रग्स केस में और भी कई बड़े सितारों के नाम सामने आएंगे?

View Results

Loading ... Loading ...

आज का राशिफल देखें